Untitled Document
Sign Up | Login    
Dynamic website and Portals
  
August 7, 2014

ತಾಕತ್ ಇದ್ದರೆ ಸಿದ್ದರಾಮಯ್ಯ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ: ಅಭ್ಯರ್ಥಿಗಳ ಸವಾಲು

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸಿ.ಎಂ, ಮನವಿ ಸಲ್ಲಿಸಲು ಹೋದರೆ ನಮ್ಮನ್ನು ಅಸ್ಪೃಶ್ಯರಂತೆ ಕಂಡರು

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

BW News Bureau : 2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿರುವವರ ವಿರುದ್ಧ ಕ್ರಮ ಕೈಗೊಂಡು ನೇಮಕಗೊಂಡ ಉಳಿದ 362 ಅಭ್ಯರ್ಥಿಗಳಿಗೆ ಹುದ್ದೆ ನೀಡಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿ ಪ್ರತಿಭಟನೆ ನಡೆಸುತ್ತಿದ್ದರು. ನೇಮಕಾತಿಯನ್ನು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆಯೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಸಹನೆ ಕಟ್ಟೆಯೊಡೆದಿದೆ.

ಯಾರೋ ಮಾಡಿದ ತಪ್ಪಿಗಾಗಿ, ಆಯ್ಕೆಗೊಂಡಿದ್ದ ಅಭ್ಯರ್ಥಿಗಳಿಗೆ ಶಿಕ್ಷೆ ನೀಡುವುದು ಏಕೆ? ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲೂ ಹಲವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಅವರೂ ವಿಧಾನಸಭೆಯನ್ನು ವಿಸರ್ಜಿಸಿ ಮರುಚುನಾವಣೆ ಎದುರಿಸಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ, ನಾವೂ ಮತ್ತೊಮ್ಮೆ ಕೆ.ಪಿ.ಎಸ್.ಸಿ ಪರೀಕ್ಷೆ ಬರೆಯುತ್ತೇವೆ ಎಂದು ನೊಂದ ಅಭ್ಯರ್ಥಿ ಡಾ.ರೋಹಿಣಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಆರ್ಥಿಕ ಮುಗ್ಗಟ್ಟು, ಕೌಟುಂಬಿಕ ಸವಾಲುಗಳನ್ನು ಎದುರಿಸಿ 3-4 ವರ್ಷ ಕಠಿಣ ಪರಿಶ್ರಮದೊಂದಿಗೆ ಕೆ.ಪಿ.ಎಸ್.ಸಿ ಪರೀಕ್ಷೆ ಬರೆದು ಗೆಜೆಟೆಡ್ ಪ್ರೋಬೆಶನರಿ ಹುದ್ದೆಗೆ ಆಯ್ಕೆಯಾಗಿದ್ದೇವೆ. ಕೆ.ಪಿ.ಎಸ್.ಸಿ ಪರೀಕ್ಷೆ ಬರೆಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿ.ಬಿ ಜಯಚಂದ್ರ ಚುನಾವಣೆ ಎದುರಿಸಿದಂತಲ್ಲ, ಆಯ್ಕೆ ಪಟ್ಟಿ ರದ್ದುಮಾಡುವವರು ರಾಜೀನಾಮೆ ನೀಡಿ ಮತ್ತೊಮ್ಮೆ ಸಚಿವರಾಗಲಿ ಆಗ ನಾವೂ ಮತ್ತೊಮ್ಮೆ ಪರೀಕ್ಷೆ ಬರೆಯಲು ಸಿದ್ದರಿದ್ದೇವೆ ಎಂದು ಅಭ್ಯರ್ಥಿಗಳು ಗುಡುಗಿದ್ದಾರೆ.

ತಿಂಗಳುಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ, ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದರೂ ಅಭ್ಯರ್ಥಿಗಳ ಸಮಸ್ಯೆ ಆಲಿಸಲು ಸಿದ್ದರಾಮಯ್ಯನವರಾಗಲೀ, ಸಚಿವರಾಗಲೀ ಆಗಮಿಸಿಲ್ಲ, ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸದೇ ಏಕಾಏಕಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂಬುದು ಆಯ್ಕೆಯಾದವರ ಅಳಲು.

ಸಿದ್ದರಾಮಯ್ಯ ಚುನಾವಣೆ ಸಂದರ್ಭದಲ್ಲಿ ಮತಯಾಚಿಸಲು ಮನೆ ಮನೆಗೆ ತೆರಳುತ್ತಾರೆ, ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಬಿಗಿಯುತ್ತಾರೆ, ಆದರೆ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಬೇಡಿ ಎಂದು ಮನವಿ ಮಾಡಲು ತೆರಳಿದ ಅಭ್ಯರ್ಥಿಗಳನ್ನು ಅಸ್ಪೃಶ್ಯರಂತೆ ಕಾಣುತ್ತಾರೆ. ಅಬ್ಯರ್ಥಿಗಳ ಮನವಿಗೂ ಕಿವಿಗೊಟ್ಟಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಪಿ.ಎಸ್.ಸಿ ಪರೀಕ್ಷೆ ತೇರ್ಗಡೆಯಾಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited