Untitled Document
Sign Up | Login    
Dynamic website and Portals
  
August 11, 2014

ದಸರಾ: ಗಜಪಡೆಗಿಲ್ಲ ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತ

ಮೈಸೂರು : 2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ.

ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನರಾಗಿ ಒಂದು ವರ್ಷ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅರಮನೆ ಮುಂಭಾಗದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ನೀಡುವ ಬದಲು ಅರಣ್ಯ ಇಲಾಖೆ ಕಚೇರಿಯಲ್ಲಿ ಸ್ವಾಗತಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಶಿಖಾ ತಿಳಿಸಿದ್ದಾರೆ.

ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನದಿಂದ 2014ನೇ ಸಾಲಿನ ದಸರಾ ಮಹೋತ್ಸವ ಕಳೆಗುಂದಿದಂತಾಗಿದೆ. ಪ್ರತಿ ವರ್ಷ ವೈಭವದಿಂದ ನಡೆಯುತ್ತಿದ್ದ ಗಜಪಡೆ ಆಗಮವೂ ಸಹ ಈಬಾರಿ ನೀರಸವಾಗಿ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Art & Culture

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
  • ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
  • ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
  • ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
  • ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited