ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ ಹಿನ್ನಲೆಯಲ್ಲಿ ನಾಲ್ವರು ಭಯೋತ್ಪದಕರು ಸಾವನ್ನಪ್ಪಿದ್ದಾರೆ.
ಇಲ್ಲಿನ ಕೆರಾನ್ ಸೇನಾ ಕ್ಯಾಂಪ್ ಮೇಲೆ ಆರೇಳು ಮಂದಿ ಭಯೋತ್ಪಾದಕರ ತಂಡದಿಂದ ಗುಂಡಿನ ದಾಳಿ ನಡೆಸಲಾಗಿದೆ. ಬಿ.ಎಸ್.ಎಫ್ ಯೋಧರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ. ಆದರೆ ಇನ್ನಿಬ್ಬರು ಉಗ್ರರು ಪರಾರಿಯಾಗಿದ್ದಾರೆ.
ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧನೋರ್ವ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ.