ಬಳ್ಳಾರಿ : ಗಣಿ ನಾಡು ಬಳ್ಳಾರಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಜಯಭೇರಿಬಾರಿಸಿದ್ದಾರೆ.
ರೆಡ್ಡಿ ಸಹೋದರರ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಆಪ್ತ ಓಬಳೇಶ್ ಅವರು ಉಪಚುನಾವಣೆಯಲ್ಲಿ ಗೆಲುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ 83,899 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಓಬಳೇಶ್ 50,795 ಮತಗಳ ಮೂಲಕ ತೀವ್ರ ಹಿನ್ನಡೆಸಾಧಿಸಿದ್ದಾರೆ.
ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎನ್.ವೈ.ಗೋಪಾಲಕೃಷ್ಣ, ಬಳ್ಳಾರಿಯ ಜನ ಬದಲಾವಣೆ ಬಯಸಿ ಕಾಂಗ್ರೆಸ್ ನ್ನು ಗೆಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ನಾವು ಪ್ರಭಾವಿಗಳಲ್ಲದಿದ್ದರೂ ಕಾಂಗ್ರೆಸ್ ನ ಒಗ್ಗಟ್ಟಿನಿದಾಗಿ ಈ ಗೆಲುವು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.