Untitled Document
Sign Up | Login    
Dynamic website and Portals
  
August 27, 2014

ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿಲ್ಲ: ಸದಾನಂದ ಗೌಡ

ಕೇಂದ್ರ ಸಚಿವ ಸದಾನಂದ ಗೌಡ ಕೇಂದ್ರ ಸಚಿವ ಸದಾನಂದ ಗೌಡ

ಕುಶಾಲನಗರ : ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು, ಅವರಿಗಾಗಿಯೇ ಮಾರ್ಗದರ್ಶಕ ಮಂಡಲ ಎಂಬ ಸಮಿತಿ ರಚಿಸಿ, ಆ ಮೂಲಕ ಬಿಜೆಪಿಯಲ್ಲಿ ಹಿರಿಯನಾಯಕರನ್ನುಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಕುಶಾಲನಗರದಲ್ಲಿ ಪ್ರತಿಕ್ರಿಯಿಸಿದ ಸದಾನಂದ ಗೌಡ,ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹೊಸತನಕ್ಕೆ ಆದ್ಯತೆ ನೀಡಿ ಸಂಘಟನೆಗೆ ಶಕ್ತಿ ತುಬಬೇಕಿದೆ. ಹೀಗಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯಲು ಪ್ರತ್ಯೇಕ ಸಮಿತಿ ರಚನೆ ಮಾಡಲಾಗಿದೆ ಎಂದರು.

ಹಿರಿಯರಿಂದ ಮರ್ಗದರ್ಶನ ಪಡೆಯಲು ಅವರಿಗಾಗಿ ಮರ್ಗದರ್ಶಕ ಮಂಡಳಿ ರಚಿಸಲಾಗಿದೆ. ಕಿರಿಯರ ಚಟುವಟಿಕೆ ಕ್ರೋಢಿಕರಿಸಲು ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಸದೀಯ ಮಂಡಳಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹಣಹಂಚುವ ಮೂಲಕ ಜನರನ್ನು ಬೆದರಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಇದರಿಂದ ಬಿಜೆಪಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಉಪಚುನಾವಣೆ ಮಾನದಂಡವಲ್ಲ. ಆದರೆ ಉಪಚುನಾವಣೆಯ ಸೋಲಿನ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವೆ ಪೈಪೋಟಿ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಿಡಿಕಾರಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited