ಬೆಂಗಳೂರು : ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.3 ರೊಳಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕಾರ್ತಿಕ್ ಗೌಡ ಅವರಿಗೆ ಸೆ.1ರಂದು ನೊಟೀಸ್ ಜಾರಿ ಮಾಡಿದ್ದರು. ಆದರೆ ಈ ವರೆಗೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಾರ್ತಿಕ್ ಗೌಡ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸೆ.3ರಂದು ವಿಚಾರಣೆಗೆ ಹಾಜರಾಗದೇ ಇದ್ದರೆ ಸೆ.4ರಂದು ಕಾರ್ತಿಕ್ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಗುತ್ತದೆ ಎಂದು ಖಾಸಗಿ ಮಾಧ್ಯವೊಂದು ವರದಿ ಮಾಡಿದೆ.
ಕಾರ್ತಿಕ್ ಗೌಡ ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಇದೀಗ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಇದರಿಂದ ತಮಗೆ ವಂಚನೆಯಾಗಿದೆ ಎಂದು ನಟಿ ಮೈತ್ರಿಯಾ ಗೌಡ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.