BW News Bureau : ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆ.ಪಿ.ನಗರ ಕಾರ್ಪರೇಟರ್ ನಂಜುಂಡಪ್ಪ ಹಾಗೂ ರವೀಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ಆರ್. ಅಶೋಕ್ ಅವರು ನಂಜುಂಡಪ್ಪ ಅವರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಹೇಳುತ್ತಿದ್ದರೆ, ವಿ.ಸೋಮಣ್ಣ ಅವರು, ರವೀಂದ್ರ ಅಥವಾ ಶಾಂತ ಕುಮಾರಿಯವರನ್ನು ಮೇಯರ್ ಆಗಿ ಆಯ್ಕೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ.
ಈ ನಡುವೆ ಕಾರ್ಪರೇಟರ್ ಗೀತಾ ಅವರನ್ನು ಉಪಮೇಯರ್ ಆಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.
ಈಗಾಗಲೇ ಬಿಜೆಪಿ ಕಛೇರಿಯಲ್ಲಿ ಸಭೆ ಆರಂಭವಾಗಿದ್ದು ಪಾಲಿಕೆ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಸಂಜೆ ವೇಳೆಗೆ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಗೊಂದಲಕ್ಕೆ ತೆರೆ ಬೀಳಲಿದೆ.