ಶ್ರೀನಗರ : ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಉಗ್ರರಿಂದ ಎ.ಕೆ.47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ನಡುವೆ ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಪಾಕ್ ಗಡಿಗೆ ಹೊಂದಿಕೊಂಡತ್ತಿರುವ ಸೇನಾ ಬಂಕರ್ ಗಳಿಗೂ ನೀರು ನಿಗ್ಗಿದೆ. ಇದರಲ್ಲಿನ ಶಸ್ತ್ರಾಸ್ತ್ರಗಳ ರಕ್ಷಣೆಗೆ ಯೋಧರು ಶ್ರಮಿಸುತ್ತಿದ್ದಾರೆ. ಈ ಭಾಗದಲ್ಲಿ ಉಗ್ರರ ಒಳನುಸುಳುವಿಕೆ ಹೆಚ್ಚಿರುವುದರಿಂದ ಕಟ್ಟೆಚ್ಚರ ವಹಿಸಲಾಗಿದೆ.