Untitled Document
Sign Up | Login    
Dynamic website and Portals
  
September 13, 2014

ಉಪಚುನಾವಣೆ: ಮತದಾನ ಆರಂಭ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ನ ವಡೋದರಾ ಸೇರಿದಂತೆ 3 ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.

ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸೆ.16ರಂದು ಫಲಿತಾಂಶ ಹೊರಬೀಳಲಿದೆ.

ಕಳೆದ ತಿಂಗಳು ನಾಲ್ಕು ರಾಜ್ಯಗಳ 18 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ 8ರಲ್ಲಿ ಗೆದ್ದು ತುಸು ಹಿನ್ನಡೆ ಸಾಧಿಸಿದ್ದ ಹಿನ್ನಲೆಯಲ್ಲಿ ಈ ಉಪಚಾನವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷಗಳ ಪಾಲಿಗೆ ಮಹತ್ವದ್ದಾಗಿದೆ. ಇನ್ನು ಕಳೆದ ತಿಂಗಳು 10 ಸ್ಥಾನಗಳನ್ನು ಗೆದ್ದು ಬೀಗಿದ್ದ ಕಾಂಗ್ರೆಸ್ ಮಿತ್ರಪಕ್ಷಗಳಿಗೂ ಈ ಚುನಾವಣೆ ಸವಾಲಿನದ್ದಾಗಿದೆ.

ಆಜಂಗಢ ಹಾಗೂ ಮೇನ್ ಪುರಿ ಎರಡರಲ್ಲೂ ಗೆದ್ದಿದ್ದ ಸಮಾಜವಾಧಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಮೇನ್ ಪುರಿ ಕ್ಷೇತ್ರ ತ್ಯಜಿಸಿದ್ದರು. ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಎರಡಕ್ಕೂ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಶಾಸಕತ್ವ ಉಳಿಸಿಕೊಳ್ಳಲು ಮೆದಕ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಹಲವು ಶಾಸಕರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾದ ಹಿನ್ನಲೆಯಲ್ಲಿ 9 ರಾಜ್ಯಗಳ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited