Untitled Document
Sign Up | Login    
Dynamic website and Portals
  
September 17, 2014

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇಲ್ಲಿನ ಮಚ್ಚಿಲ್ ವಿಭಾಗದಲ್ಲಿ ಈ ಎನ್ ಕೌಂಟರ್ ನಡೆದಿದೆ.

ಬೆಳಗಿನ ಜಾವ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಒಳ ನುಸುಳಲು ಯತ್ನಿಸಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಗೆ ಉಗ್ರರು ಬಲಿಯಾಗಿದ್ದಾರೆ.

ಎರಡು ಎಕೆ-47 ರೈಫಲ್ ಗಳು, ಒಂದು ಯುಬಿಜಿಎಲ್ ಸೇರಿದಂತೆ ಉಗ್ರರು ಅಡಗಿಸಿಟ್ಟ ಅಪಾರ ಪ್ರಮಾಣದ ಶಸ್ತ್ರಾಸ್ತ್ರರಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಸೇನಾ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಜಮ್ಮು-ಕಾಶ್ಮಿರದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದೆ. ಒಂದೆಡೆ ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಜನತೆ ತತ್ತರಿಸಿದ್ದು, ಯೋಧರು ಪರಿಹಾರಕಾರ್ಯದಲ್ಲಿ ತೊಡಗಿದ್ದರೆ, ಇನ್ನೊಂದೆಡೆ ಗಡಿ ಭಾಗದಲ್ಲಿ ಉಗ್ರರ ಒಳ ನುಸುಳುವಿಕೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited