Untitled Document
Sign Up | Login    
Dynamic website and Portals
  
September 18, 2014

ಭಾರತ-ಚೀನಾ ದ್ವಿಪಕ್ಷೀಯ ಮಾತುಕತೆ: 12 ಒಪ್ಪಂದಗಳಿಗೆ ಸಹಿ

ಪ್ರಧಾನಿ ನರೇಂದ್ರ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಪ್ರಧಾನಿ ನರೇಂದ್ರ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್

ನವದೆಹಲಿ : ಭಾರತ-ಚೀನಾ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಮುಕ್ತಾಯವಾಗಿದೆ. ಉಭಯ ದೇಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸಮ್ಮುಖದಲ್ಲಿ ಒಟ್ಟು 12 ಮಹತ್ವದ ಒಪ್ಪಂದಗಳಿಗೆ ಸಹಿಹಾಕಿವೆ.

ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷರೊಂದಿಗಿನ ಮಾತುಕತೆ ಫಲಪ್ರದವಾಗಿದೆ. ಭಾರತದ ವಿವಿಧ ಕ್ಷೇತ್ರಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಚೀನಾ ಸುಮಾರು 20 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಲಿದೆ ಎಂದರು.

5 ವ್ಯಾಪಾರ ಒಪ್ಪಂದ ಸೇರಿದಂತೆ 12 ಮಹತ್ವದ ಒಡಂಬಡಿಕೆಗಳಿಗೆ ಉಭಯ ದೇಶಗಳು ಸಹಿ ಹಾಕಿವೆ. ರೈಲ್ವೆ ಆಧುನಿಕರಣ, ಆರ್ಥಿಕ-ವ್ಯಾಪಾರ, ಆಮದು-ರಫ್ತು, ಆಡಿಯೋ-ವಿಡಿಯೋ, ಆರೋಗ್ಯ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚೀನಾ ಭಾರತದ ಅತಿ ದೊಡ್ಡ ನೆರೆರಾಷ್ಟ್ರ. ಚೀನಾದೊಂದಿಗೆ ಭಾಂದವ್ಯ ಭಾರತಕ್ಕೆ ಅತೀ ಮುಖ್ಯ. ಉಭಯ ರಾಷ್ಟ್ರಗಳ ನಡುವೆ ಬಾಂಧ್ಯವ್ಯ ವೃದ್ಧಿಯಾಗಬೇಕು ಎಂದರು.

ಅಂತರಾಷ್ಟ್ರೀಯ ಗಡಿಯಲ್ಲಿ ಚೀನಾ ವಿನಾ ಕಾರಣ ಕ್ಯಾತೆ ತೆಗೆಯುತ್ತಿದ್ದು, ಗಡಿಯಲ್ಲಿ ಶಾಂತಿ, ಸ್ಥಿರತೆ ನೆಲೆಸಬೇಕು. ಉಭಯ ದೇಶಗಳೂ ಗಡಿಯಲ್ಲಿ ಶಾಂತಿ ಕಾಪಾಡಲು ಬದ್ಧವಾಗಿವೆ. ಸ್ವಾತಂತ್ರ್ಯಾ ನಂತರ ಭಾರತ-ಚೀನಾ ನಡುವೆ ಐತಿಹಾಸಿಕ ಸಂಬಂಧವಿದ್ದು, ಇತ್ತೀಚೆಗೆ ಉಭಯ ದೇಶಗಳ ನಡುವೆ ಆರ್ಥಿಕ ಅಭಿವೃದ್ಧಿ ಕುಂಠಿತಗೊಂಡಿದೆ. ಉಭಯ ದೇಶಗಳ ನಡುವಿನ ವ್ಯಾಪಾರ ಅಸಮತೋಲನ ಸರಿದೂಗಬೇಕು. ಮುಂದಿನ ದಿನಗಳಲ್ಲಿ ಉತ್ತಮ ಆರ್ಥಿಕ ಸಂಬಂಧ ಹೊಂದಲು ಈ ಭೇಟಿ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಕ್ಸಿ ಜಿನ್ ಪಿಂಗ್, ಉಭಯ ದೇಶಗಳ ಗಡಿ ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಲಾಗುವುದು ಎಂದರು. ಉಭಯ ದೇಶಗಳ ಸಂಬಂಧಗಳ ಬಗ್ಗೆ ಮಹತ್ವದ ಮಾತುಕತೆ ನಡೆದಿದ್ದು, ಸಾಮಾನ್ಯ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದೇವೆ. ಭಾರತ-ಚೀನಾ ದೇಶಗಳ ಉದ್ದೇಶವೂ ಒಂದೇ ಆಗಿವೆ. ಅಭಿವೃದ್ಧಿ ಸೂತ್ರವೂ ಒಂದೇ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited