Untitled Document
Sign Up | Login    
Dynamic website and Portals
  
September 19, 2014

ಬಿಸಿಯೂಟ ಸೇವಿಸಿ 150ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

BW News Bureau : 'ಬಿಸಿಯೂಟ' ತಯಾರಿಕೆಯಲ್ಲಿ ಬೇಜವಾಬ್ದಾರಿತನ ಮತ್ತೊಮ್ಮೆ ಸಾಬೀತಾಗಿದ್ದು, ಬಿಸಿಯೂಟ ಸೇವಿಸಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಂಗಳೂರಿನ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿರುವ ಉರ್ದು ಶಾಲೆಯ ವಿದ್ಯಾರ್ಥಿಗಳು ಸೆ.19ರಂದು ಮಧ್ಯಾಹ್ನ ಬಿಸಿಯೂಟ ಸೇವಿಸಿದ ನಂತರ ತೀವ್ರ ಅಸ್ವಸ್ಥರಾಗಿದ್ದಾರೆ. ಊಟದಲ್ಲಿ ಹಲ್ಲಿ ಬಿದ್ದಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಘಟನೆ ವರದಿಯಾದ ಕೂಡಲೇ ಸಚಿವ ರಾಮಲಿಂಗಾ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಇದೇ ವೇಳೆ ವೈದ್ಯರೊಂದಿಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಅಂಬೇಡ್ಕರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಪೋಷಕರು ಅಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೋಷಕರು, ಘಟನೆಗೆ ಶಾಲಾ ಮುಖ್ಯಸ್ಥರೇ ನೇರ ಹೊಣೆ ಎಂದು ದೂರಿದ್ದಾರೆ. ಈ ಶಾಲಾ ಮಕ್ಕಳಿಗೆ ಇಸ್ಕಾನ್ ಸಂಸ್ಥೆ ಬಿಸಿಯೂಟ ಪೂರೈಕೆ ಮಾಡುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited