BW News Bureau : 'ಡಿ.ಜೆ ಹಳ್ಳಿ'ಯಲ್ಲಿರುವ ಸರ್ಕಾರಿ ಉರ್ದು ಶಾಲೆಯಲ್ಲಿ ಬಿಸಿಯೂಟ ಸೇವನೆಯಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರಿಂದ ಒಂದು ವಾರಗಳ ಕಾಲ ಇಸ್ಕಾನ್ ಸಂಸ್ಥೆಯಿಂದ ಬಿಸಿಯೂಟ ಪೂರೈಕೆಯನ್ನು ತಡೆಹಿಡಿಯಲಾಗಿದೆ.
ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹಸೀನ್ ಸೆ.22ರಂದು ಡಿ.ಜೆ ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಒಂದು ವಾರಗಳಾ ಕಾಲ ಇಸ್ಕಾನ್ ನಿಂದ ಶಾಲೆಗೆ ಬಿಸಿಯೂಟ ಪೂರೈಕೆಗೆ ತಡೆ ನೀಡಲಾಗಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳ ಪೋಷಕರ ಒತ್ತಾಯದ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಸೆ.19ರಂದು ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳನ್ನು ಬೆಂಗಳೂರಿನ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಸಿಯೂಟ ತಯಾರಿಸುತ್ತಿದ್ದ ಇಸ್ಕಾನ್ ಸಂಸ್ಥೆ ವಿರುದ್ಧ ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣದ ಸಂಬಂಧ ತನಿಖೆ ನಡೆಯುತ್ತಿದೆ.