Untitled Document
Sign Up | Login    
Dynamic website and Portals
  
September 29, 2014

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಚೆನ್ನೈ : ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಅರಿಗೆ ಜಾಮೀನು ನೀಡುವಂತೆ ಆಗ್ರಹಿಸಿ, ಚೆನ್ನೈನ ಮರೀನಾ ಬೀಚ್ ಬಳಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲು ತೀರ್ಮಾನಿಸಲಾಗಿದೆ.

ಹಲವು ಸಚಿವರು, ಶಾಸಕರು, ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಧರಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪ್ರತಿಭಟನೆಯ ಮೂಲಕ ಜಯಲಲಿತಾ ಬಿಡುಗಡೆಗೆ ಕಾನೂನಿನ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ಈ ನಡುವೆ ತಮಿಳುನಾಡು ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾತ್ತು. ಅಲ್ಲದೇ ಇಂದು ಅವರು ಪ್ರಮಾಣ ವಚನ ಸ್ವೀಕರಿಸಬೇಕಾಗಿತ್ತು. ಆದರೆ ಜಯಲಲಿತಾ ಅವರಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿರುವ ಪನ್ನೀರ್ ಸೆಲ್ವಂ ಸಧ್ಯ ಪ್ರಮಾಣ ವಚನ ಸ್ವೀಕರಿಸದಿರಲು ನಿರ್ಧರಿಸಿದ್ದಾರೆ.

ಜಯಲಲಿತಾ ಅವರಿಗೆ ಜಾಮೀನು ಸಿಕ್ಕಿ, ಬಿಡುಗಡೆಯಾದ ಬಳಿಕ ಪ್ರಮಾಣ ವಚನ ಸ್ವೀಕರಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜಯಯಲಿತಾ ಜೈಲು ಪಾಲಾಗಿರುವ ಹಿನ್ನಲೆಯಲ್ಲಿ ಬೇಸರಗೊಂಡು ತಮಿಳುನಾಡಿನಲ್ಲಿ ಈಗಾಗಲೇ 25 ಜನರು ಸಾವನ್ನಪ್ಪಿದ್ದಾರೆ.

10 ಜನರು ಹೃದಯಾಘಾತದಿಂದ ಸಾವನ್ನಪ್ಪಿದರೆ, 15 ಬೆಂಬಲಿಗರು ಆತ್ಮಹತ್ಯೆ ಮಾಡಿಕೊಂಡು ಅಭಿಮಾನದ ಅತಿರೇಕ ಮೆರೆದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited