Untitled Document
Sign Up | Login    
Dynamic website and Portals
  
October 8, 2014

ರಾಹುಲ್ ಗಾಂಧಿ ಪ್ರಕಾರ ಪ್ರಧಾನಿ ಮೋದಿ ವಿರೋಧ ಪಕ್ಷದ ನಾಯಕರಂತೆ!

ರಾಹುಲ್ ಗಾಂಧಿ ಪ್ರಕಾರ ಪ್ರಧಾನಿ ಮೋದಿ ವಿರೋಧ ಪಕ್ಷದ ನಾಯಕರಂತೆ!

ಮುಂಬೈ : ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕ ಯಾರು? ಇದೆಂಥಾ ಪ್ರಶ್ನೆ ಲೋಕಸಭೆಯಲ್ಲಿ ವಿರೋಧ ಪಕ್ಷವೇ ಇಲ್ಲವಲ್ಲ ಎಂಬ ಉತ್ತರ ಸಹಜ, ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದ ನಾಯಕರಂತೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂಗವಾಗಿ ಅ.8ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡ ರಾಹುಲ್ ಗಾಂಧಿ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು ಮೋದಿ ಅವರನ್ನು ವಿಪಕ್ಷ ನಾಯಕನೆಂದು ಕರೆದು ಯಡವಟ್ಟು ಮಾಡಿದ್ದಾರೆ. ಭಾಷಣದ ಮಧ್ಯೆ, ಕಳೆದ 60 ವರ್ಷಗಳಿಂದ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಮೋದಿ ಆರೋಪಿಸಿದ್ದಾರೆ ಎಂದು ರಾಹುಲ್ ಗಾಂಧಿ ನೀಡಿದ ಹೇಳಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ನಾಯಕನ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫೇಸ್ ಬುಕ್ ಖಾತೆದಾರರು, ರಾಹುಲ್ ಗಾಂಧಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿ ರ್ಯಾಲಿ ನಡೆಸಿರುವುದು ಬಿಜೆಪಿಗೆ ಅನುಕೂಲಕರವಾಗಲಿದೆ. ರಾಹುಲ್ ಗಾಂಧಿ ಮತ್ತೆ ಭಾಷಣ ಮಾಡಲು ಆರಂಭಿಸಿರುವುದು ಕಾಂಗ್ರೆಸ್ ಸೀಟುಗಳನ್ನು ಖಂಡಿತವಾಗಿ ಕಡಿಮೆ ಮಾಡಲಿದೆ ಎಂದು ವ್ಯಂಗ್ಯವಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited