Untitled Document
Sign Up | Login    
Dynamic website and Portals
  
October 15, 2014

ಮಹಾರಾಷ್ಟ್ರ, ಹರ್ಯಾಣದಲ್ಲಿ ಮತದಾನ ಆರಂಭ

ಮುಂಬೈ : ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಉಭಯ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ಅ.19ರಂದು ಫಲಿತಾಂಶ ಹೊರಬೀಳಲಿದೆ.

ಉಭಯ ರಾಜ್ಯಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸರತಿ ಸಾಲಿನಲ್ಲಿ ಬಂದು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ 4119 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 8.25 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಕಾಂಗ್ರೆಸ್ 287, ಬಿಜೆಪಿ 280, ಶಿವಸೇನೆ 282, ಎನ್ ಸಿಪಿ 278 ಹಾಗೂ ಎಂ ಎನ್ ಎಸ್ 219 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇಲ್ಲಿ ಪಂಚಕೋನ ಸ್ಪರ್ಧೆ ಏರ್ಪಟ್ಟಿದೆ.

ಹರ್ಯಾಣದ 90 ಕ್ಷೇತ್ರಗಳಲ್ಲಿ 1351 ಹುರಿಯಾಳುಗಳು ಸ್ಪರ್ಧಿಸಿದ್ದು, 1.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಹರ್ಯಾಣದಲ್ಲಿ ಕಾಂಗ್ರೆಸ್ 90, ಬಿಜೆಪಿ 90, ಭಾರತ ರಾಷ್ಟ್ರೀಯ ಲೋಕದಳ 88, ಹರ್ಯಾಣ ಜನಹಿತ ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇಲ್ಲಿ ಕಾಂಗ್ರೆಸ್-ಬಿಜೆಪಿ-ಐಎನ್ ಎಲ್ ಡಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮಾಹಾರಾಷ್ಟ್ರದ ನಾಗ್ಪುರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮತದಾನಕ್ಕೆ ಅಡ್ಡಿಯುಂಟಾಗಿದೆ. ಇಲ್ಲಿನ ಅವಡೇಘಾಟ್ ಮತಗಟ್ಟೆ ಬಳಿ ಸಿಡಿಲು ಬಡಿದು 8 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಹರ್ಯಾಣದಲ್ಲಿ ಈ ಬಾರಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಭುಪಿಂದರ್ ಸಿಂಗ್ ಹೂಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited