Untitled Document
Sign Up | Login    
Dynamic website and Portals
  
October 21, 2014

ದೀಪಾವಳಿ ಅನಾಹುತ: ಫರೀದಾಬಾದ್ ನಲ್ಲಿ 200 ಪಟಾಕಿ ಮಳಿಗೆಗಳಿಗೆ ಬೆಂಕಿ

ಹರ್ಯಾಣ : 'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ.

ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ದಸರಾ ಮೈದಾನದಲ್ಲಿ 200 ಮಳಿಗೆಗಳನ್ನು ತೆರೆಯಲಾಗಿತ್ತು. ಅ.21ರ ಸಂಜೆ ವೇಳೆಗೆ ಒಂದು ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ 200 ಮಳಿಗೆಗಳೂ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ. ಬೆಂಕಿ ವ್ಯಾಪಿಸಿರುವ ಪರಿಣಾಮ ಮಳಿಗೆಗಳಲ್ಲಿದ್ದ ಪಟಾಕಿಗಳು ಮುಗಿಲೆತ್ತರಕ್ಕೆ ಸಿಡಿಯುತ್ತಿವೆ. ಅದೃಷ್ಟವಶಾತ್ ಈವರೆಗೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ದಸರಾ ಮೈದಾನದ ವಾಹನ ನಿಲುಗಡೆ ಸ್ಥಳಕ್ಕೂ ಬೆಂಕಿ ವ್ಯಾಪಿಸಿದ್ದು ನೂರಾರು ವಾಹನಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ 18 ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದಾರೆ. ಆದರೂ ಮಳಿಗೆಗಳು ಮುಗಿಲೆತ್ತರಕ್ಕೆ ಹೊತ್ತಿ ಉರಿಯುತ್ತಿದ್ದು ಪಟಾಕಿ ಮಳಿಗೆಗೆಳ ಹತ್ತಿರ ಹೋಗಲೂ ಸಾಧ್ಯವಾಗುತ್ತಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited