Untitled Document
Sign Up | Login    
Dynamic website and Portals
  
October 22, 2014

ನಗರದ ಮತ್ತೊಂದು ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

BW News Bureau : ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಶಾಲೆಯ ಐವರು ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಪೊಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ವೈದ್ಯರು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಖಚಿತಪಡಿಸಿದ್ದಾರೆ.

ಈ ಬಗ್ಗೆ ಪೋಷಕರು ಜಾಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ದಿ, ಕಾನೂನು ಸುವ್ಯವಸ್ಥೆ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್, ಹೇಮಂತ್ ನಿಂಬಾಳ್ಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited