Untitled Document
Sign Up | Login    
Dynamic website and Portals
  
October 22, 2014

ದೀಪಾವಳಿ ಪಟಾಕಿಯಿಂದ ಮುನ್ನೆಚ್ಚರಿಕೆ ಅಗತ್ಯ

ಬೆಂಗಳೂರು : 2014 ನೇ ಸಾಲಿನಲ್ಲಿ ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸುವ ದಿಸೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

ಜನ ಸಂದಣಿ ಹಾಗೂ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ದಾಸ್ತಾನು ಹಾಗೂ ಮಾರಾಟಕ್ಕೆ ನಿರಾಕ್ಷೇಪಣಾ ಪತ್ರ ನೀಡಬಾರದು ಹಾಗೂ ತೆರೆದ ಮೈದಾನಗಳಲ್ಲಿ ಮಾತ್ರ ಪಟಾಕಿ ದಾಸ್ತಾನು ಹಾಗೂ ಮಾರಾಟಕ್ಕೆ ನಿರಾಪೇಕ್ಷಣಾ ಪತ್ರವನ್ನು ಸಂಬಂಧಪಟ್ಟ ಪರವಾನಗಿ ಪ್ರಾಧಿಕಾರಕ್ಕೆ ನೀಡಬೇಕೆಂದು ಅ.16ರಂದು ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಗ್ನಿಶಾಮಕ ಇಲಾಖೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಎಲ್ಲಾ ವಾಹನಗಳನ್ನು ಹಾಗೂ ಸಿಬ್ಬಂದಿಗಳನ್ನು ತಯಾರಿಯಲ್ಲಿಟ್ಟರಬೇಕು ಎಂದು ಸೂಚಿಸಲಾಗಿದೆ.

ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಬಳಸುವಾಗಿ ಸಾರ್ವಜನಿಕರು ಈ ಕೆಳಕಂಡ ಸುರಕ್ಷಿತ ಕ್ರಮಗಳನ್ನು ಪಾಲಿಸಲು ಮನವಿ ಮಾಡಲಾಗಿದೆ.

ಮಕ್ಕಳಿಗೆ ದೊಡ್ಡವರ ಸಮ್ಮುಖದಲ್ಲೇ ಪಟಾಕಿ ಹಚ್ಚಲು ತಿಳಿಸತಕ್ಕದ್ದು.ತೆರೆದ ಪ್ರದೇಶದಲ್ಲಿ ಪಟಾಕಿ ಹಚ್ಚುವುದು ಸುರಕ್ಷಿತ.ಯಾವುದೆ ಸಂದರ್ಭದಲ್ಲಿ ಮನೆಯೊಳಗೆ ಪಟಾಕಿ ಹಚ್ಚಬಾರದು.

ಆದಷ್ಟು ಮಟ್ಟಿಗೆ ಶರೀರಕ್ಕೆ ಹೊಂದಿಕೊಳ್ಳುವಂತಹ ಬಟ್ಟೆಗಳನ್ನು ಧರಿಸತಕ್ಕದ್ದು, ದೊಗಲೆ ಹಾಗೂ ಸಿಂಥೆಟಿಕ್ ಬಟ್ಟೆಗಳನ್ನು ದರಿಸತಕ್ಕದ್ದು. ದೊಗಲೆ ಹಾಗೂ ಸಿಂಥೆಟಿಕ್ ಬಟ್ಟೆಗಳನ್ನು ದರಿಸಬಾರದು.

ಸುರ ಸುರ ಬತ್ತಿ ಇತ್ಯಾದಿಗಳನ್ನು ಶರೀರದ ಆದಷ್ಟು ದೂರ ಹಿಡಿಯಬೇಕು. ಪಟಾಕಿ ಹಚ್ಚುವಾಗಿ ಅದರ ಮೇಲೆ ಬಾಗಬಾರದು.ಸಾಧ್ಯವಾದಷ್ಟು ಮಟ್ಟಿಗೆ ಪಕ್ಕದಿಂದ ಹಚ್ಚತಕ್ಕದ್ದು. ಯಾವುದೇ ಪಾತ್ರೆ ಒಳಗೆ ಅಥವಾ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ಹಚ್ಚಬಾರದು. ಯಾವುದೇ ಸಂದರ್ಭದಲ್ಲಿ ಪಟಾಕಿಗಳನ್ನು ಬೆಂಕಿಯ ಅಥವಾ ಉಷ್ಣತೆ ಹೆಚ್ಚಿರುವ ಸ್ಥಳಗಳ್ಲಲಿ ಇಡಬಾರದು ಹಾಗೂ ಪೊಟ್ಟಣಗಳನ್ನು ತೆರೆಯಬಾರದು. ಹಚ್ಚಿರುವ ಪಟಾಕಿ ಸಿಡಿಯದಿದ್ದರೆ ಅದನ್ನು ಪುನರ್ ಪರೀಕ್ಷಿಸಲು ಪ್ರಯತ್ನಿಸಬಾರದು. ಹೂ ಕುಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ಹಚ್ಚಬಾರದು. ರಾಕೆಟ್ ತರಹದ ಪಟಾಕಿಗಲನ್ನು ಹಚ್ಚುವಾಗ ಯಾವುದೇ ಕಿಟಕಿ, ಬಾಗಿಲು, ತೆರೆದಿರುವ ಕಟ್ಟಡ, ಗುಡಿಸಲು, ಹುಲ್ಲಿನ ಬಣವೆ ಇತ್ಯದಿ ಮೇಲೆ ಬೀಳದಂತೆ ಎಚ್ಚರ ವಹಿಸಬೆಕು. ರಾಕೆಟ್‌ಗಳನ್ನು ಬಳಸುವುದನ್ನು ಪೂರ್ಣವಾಗಿ ತಪ್ಪಿಸುವುದ ಉತ್ತಮ. ಬೇರೆಯವರಿಗೆ ತೋರಿಸಿಕೊಳ್ಳಲು ಪಟಾಕಿ ಹಚ್ಚುವಾಗ ಅಪಾಯಕ್ಕೆ ಅವಕಾಶ ಕೊಡಬಾರದು. ಪಟಾಕಿ ಹಚ್ಚುವಾಗ ಯಾವಾಗಲು ಪಕ್ಕದಲ್ಲಿ ನೀರನನು ಇಟ್ಟುಕೊಳ್ಳುವುದು ಸುರಕ್ಷಿತ. ಆಕಸ್ಮಿಕವಾಗಿ ಸುಟ್ಟ ಗಾಯಗಳಾದರೆ ಕೂಡಲೇ ತಣ್ಣೀರನ್ನು ಸುರಿಯತಕ್ಕದ್ದು. ಸಾಧ್ಯವಾದಷ್ಟು ಮಟ್ಟಿಗೆ ಸ್ನೇಹಿತರ ಜೊತೆ ಸೇರಿ ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಪಟಾಕಿ ಹಚ್ಚುವುದು ಸೂಕ್ತ. ಇದರಿಂದ ಎಲ್ಲರೂ ಸಂತೋಷ ಪಡಬಹುದು ಹಾಗೂ ಸುರಕ್ಷಿತ. ಪಟಾಕಿ ಹಚ್ಚುವಾಗ ಮಕ್ಕಳು, ವಯಸ್ಸಾದವರು, ಖಾಯಿಲೆ ಇರುವವರು ಹಾಗೂ ಪ್ರಾಣಿಗಳನ್ನು ಗಮನಿಸಿ ಅವರಿಗೆ ಆಗುವ ತೊಂದರೆಗಳನ್ನು ತಪ್ಪಿಸಲು ಪ್ರಯತ್ನಿಸಿ.

ಯಾವುದೇ ರೀತಿಯ ಅಗ್ನಿಅನಾಹುತಗಳು ಸಂಭವಿಸಿದಿದಲ್ಲಿ ಅಗ್ನಿಶಾಮಕ ಇಲಾಖೆಯ ಫೈರ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 101 ಹಾಗೂ ಬೆಂಗಳೂರು ನಗರದಲ್ಲಿ ಸಂಭವಿಸಿದಲ್ಲಿ ದೂರವಾಣಿ ಸಂಖ್ಯೆ 101 ಅಥವಾ 080-22971500 ಅಥವಾ 080- 22971600 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಕೋರಿದೆ. ಸಾಧ್ಯವಾದಷ್ಟು ಮಟ್ಟಿಗೆ ಹೆಚ್ಚು ಶಬ್ದ ಬರುವ ಪಟಾಕಿಗಳನ್ನು ಆಸ್ಪತ್ರೆ ಮತ್ತು ಇತ್ಯಾದಿ ಸೂಕ್ಷ್ಮ ಪ್ರದೇಶಗಳಲ್ಲಿ ಬಳಸುವುದನ್ನು ತಪ್ಪಿಸಿ ಎಂದು ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited