Untitled Document
Sign Up | Login    
Dynamic website and Portals
  
October 22, 2014

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಘಾತಕಾರಿ :ಜಾರ್ಜ್

ಬೆಂಗಳೂರು : ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ.

ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ವಿಷಯ ಅ.21ರಂದು ಸಂಜೆ ಬಹಿರಂಗವಾಗಿತ್ತು.

ಘಟನೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರನ್ನು ಕಳುಹಿಸಲಾಗಿದೆ. ಕಾನೂನಿನಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ತಿಳಿಸಿದ್ದೇವೆ. ಘಟನೆಯ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, 24 ಗಂಟೆಯೊಳಗೆ ತನಿಖಾ ವರದಿ ನೀಡುವಂತೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.

ಶಾಲಾ ಮಕ್ಕಳ ಸುರಕ್ಷತೆಗಾಗಿ ಈಗಾಗಲೇ ಸರ್ಕಾರ ಗೈಡ್ ಲೈನ್ ಹೊರಡಿಸಿದ್ದು, ಸರ್ಕಾರದ ಗೈಡ್ ಲೈನ್ ಅನುಸರಿಸಲಾಗಿದೆಯೇ ಎಂಬ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದೆ ಎಂದ ಅವರು, ಸರ್ಕಾರದ ಮಾರ್ಗಸೂಚಿ ಅನುಸರಿದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited