ನವದೆಹಲಿ : 'ಸರ್ದಾರ್ ವಲ್ಲಭ ಭಾಯ್ ಪಟೇಲ್' ಅವರ 139ನೇ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ರನ್ ಫಾರ್ ಯೂನಿಟಿ ಕಾರ್ಯಕ್ರಮದ ಮೂಲಕ ಉತ್ತಮ ಆಡಳಿತ ಹಾಗೂ ರಾಷ್ಟ್ರೀಯ ಏಕೀಕರಣದ ಬಗ್ಗೆ ಉಕ್ಕಿನ ಮನುಷ್ಯನ ಸಂದೇಶದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಜಾವ್ಡೇಕರ್ ತಿಳಿಸಿದ್ದಾರೆ.
ಸರ್ದಾರ್ ಪಟೇಲರು ನಮ್ಮ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪಟೇಲರ ಕೊಡುಗೆಯನ್ನು ಯುವಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅ.31ರಂದು ರನ್ ಫಾರ್ ಯೂನಿಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಪಟೇಲರ ಜನ್ಮದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ರೇಡಿಯೋ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.