ಕೊಚ್ಚಿ : 'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ ಮಧ್ಯೆ ಹಾರಾಟ ನಡೆಸುವ ವಿಮಾನವನ್ನು ಸ್ಫೋಟಿಸುವುದಾಗಿ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ನಡೆಸುತ್ತಿವೆ.
ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರಿಕೆ ಕೈಗೊಳ್ಳಲಾಗಿದೆ. ಬೆದರಿಕೆ ಕರೆಯ ಸತ್ಯಾಂಶವನ್ನು ಭದ್ರತಾ ಸಿಬ್ಬಂದಿಗಳು ಪರಿಶೀಲಿಸುತ್ತಿದ್ದಾರೆ. ಪೊಲೀಸರು ವಿಮಾನ ನಿಲ್ದಾಣ ಹಾಗೂ ವಿಮಾನದ ಹೊರಗಡೆ ಬೀಡುಬಿಟ್ಟಿದ್ದು, ವಿಮಾನ ನಿಲ್ದಾಣಕ್ಕೆ ಬರುವವರನ್ನು ಪರೀಕ್ಷಿಸುತ್ತಿದ್ದಾರೆ.
ದೀಪಾವಳಿ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಎನ್.ಎಸ್.ಜಿ ಡಿ.ಜಿ, ಜಯಂತ್ ಚೌಧರಿ ಎಚ್ಚರಿಕೆ ನೀಡಿದ್ದರು.