Untitled Document
Sign Up | Login    
Dynamic website and Portals
  
October 26, 2014

ವಾಯುಭಾರ ಕುಸಿತ ಹಿನ್ನಲೆ: ಇನ್ನೂ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನಲೆಯಲ್ಲಿ ಅ.28ರವರೆಗೂ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ತಜ್ನರು ತಿಳಿಸಿದ್ದಾರೆ.

ವಾಯುಭಾರ ಕುಸಿತದ ನೇರ ಪರಿಣಾಮ ರಾಜ್ಯದಮೇಲಾಗದಿದ್ದರೂ ಆಗಾಗ್ಗೆ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗಲಿದೆ. ಈ ಪರಿಸ್ಥಿತಿ ನ.5ರವರೆಗೂ ಮುಂದುವರೆಯುವ ಸಾಧ್ಯತೆಯೂ ಇದೆ. ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದ್ದರೂ ವಾಡಿಕೆಯಷ್ಟು ಮಳೆಯಾಗಿಲ್ಲ ಎಂದು ಹವಾಮಾನ ತಜ್ನರು ತಿಳಿಸಿದ್ದಾರೆ

ರಾಜ್ಯದಲ್ಲಿ ಅ.1ರಿಂದ ಈ ವರೆಗೆ 119.8ಮಿ.ಮೀ ವಾಡಿಕೆ ಮಳೆಯಾಗಬೇಕಿದ್ದು, ಕೇವಲ 102.6 ಮಿ.ಮೀ ನಷ್ಟು ಮಳೆಯಾಗಿದೆ. ಶೇ.14.4ರಷ್ಟು ಮಳೆ ಕೊರತೆ ರಾಜ್ಯದಲ್ಲಿ ಉಂಟಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited