Untitled Document
Sign Up | Login    
Dynamic website and Portals
  
October 28, 2014

ಶಿವಮೊಗ್ಗ, ಹಾಸನ ಪಶುವೈದ್ಯಕೀಯ ಕಾಲೇಜುಗಳಿಗೆ ಮಾನ್ಯತೆ

ಬೆಂಗಳೂರು : ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ:ಉಮೇಶ್ ಚಂದ್ರ ಶರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಎರಡೂ ಕಾಲೇಜುಗಳಿಗೆ ಮಾನ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದರು.

ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ 24-8-2011 ರಿಂದ ಅನ್ವಯವಾಗುವಂತೆ ಹಾಗೂ ಹಾಸನ ಪಶುವೈದ್ಯಕೀಯ ಕಾಲೇಜಿಗೆ 24-8-2012 ರಿಂದ ಅನ್ವಯವಾಗುವಂತೆ ಮಾನ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈವರೆಗೆ ಈ ಕಾಲೇಜುಗಳಿಗೆ ಮಾನ್ಯತೆ ದೊರೆಯದ ಕಾರಣ ಇಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದರು. ನಮ್ಮ ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಗಾಗಿ ಶಿವಮೊಗ್ಗದ ಕಾಲೇಜಿಗೆ 137 ಕೋಟಿ ರೂ. ಹಾಗೂ ಹಾಸನ ಕಾಲೇಜಿಗೆ 131 ಕೋಟಿ ರೂ,. ಬಿಡುಗಡೆ ಮಾಡಿತ್ತು. ಸರ್ಕಾರದ ಪ್ರಯತ್ನದ ಫಲವಾಗಿ ಈ ಕಾಲೇಜುಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಆತಂಕ ನಿವಾರಣೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited