Untitled Document
Sign Up | Login    
Dynamic website and Portals
  
October 30, 2014

ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು: ಸುಪ್ರೀಂ

ನವದೆಹಲಿ : ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಈಗ ಅಲ್ಪಮತದ ಸರ್ಕಾರ ರಚನೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.

ದೆಹಲಿ ವಿಧಾನಸಭೆ ವಿಸರ್ಜನೆ ಮಾಡಬೇಕು ಎಂದು ಕೋರಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ದೇಶದಲ್ಲಿ ಮೊದಾಬಾರಿಗೆ ಅಲ್ಪಮತ ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಿರುವ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ಕ್ರಮ ಸಕಾರಾತ್ಮಕವಾಗಿದೆ ಎಂದು ಶ್ಲಾಘಿಸಿದೆ.

ಲೆಫ್ಟಿನೆಂಟ್ ಗವರ್ನರ್ ಕ್ರಮಕ್ಕೆ ಬೆಂಬಲ ನೀಡುವುದಾಗಿ ತಿಳಿಸಿರುವ ನ್ಯಾಯಾಲಯ, ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಒಂದು ವೇಳೆ ಸಾಧ್ಯವಾಗದಿದ್ದರೆ ನ್ಯಾಯಾಲಯಕ್ಕೆ ತಿಳಿಸುವಂತೆಯೂ ಹೇಳಿದೆ. ಈ ನಿಟ್ಟಿನಲ್ಲಿ ವಿಧಾನಸಭೆ ವಿಸರ್ಜನೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ.11ಕ್ಕೆ ಮುಂದೂಡಿದೆ.

ಸರ್ಕಾರ ರಚನೆ ವಿಳಂಬ ನೀತಿ ಕುರಿತು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಲೆಫ್ಟಿನೆಂಟ್ ಗವರ್ನರ್, ವಿವಿಧ ರಾಜಕೀಯ ಪಕ್ಷಗಳನ್ನು ಮಾತುಕತೆಗೆ ಆಹ್ವಾನಿಸಿ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸರ್ಕಾರ ರಚನೆಗೆ ಆಹ್ವಾನ ನೀಡಿರುವ ತಮ್ಮ ಪ್ರಸ್ತಾಪಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮ್ಮತಿ ನೀಡಿರುವುದರಿಂದ ಬಿಜೆಪಿ ನಾಯಕರನ್ನು ಸಮಾಲೋಚನೆಗೆ ಆಹ್ವಾನಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ನಡೆಗೆ ನ್ಯಾಯಾಲಯ ಬೆಂಬಲ ನೀಡುವುದಾಗಿ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited