ವಾರಾಣಸಿ : 'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್ ಹುಡ್ ಚಂಡಮಾರುತ ಹಿನ್ನೆಲೆಯಲ್ಲಿ ಭೇಟಿಯನ್ನು ರದ್ದುಗೊಳಿಸಲಾಗಿತ್ತು.
ಇದೇ ವೇಳೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿಯೂ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಈ ಭೇಟಿ ವೇಳೆಯಲ್ಲೇ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ಒಂದು ಗ್ರಾಮವನ್ನು ದತ್ತು ಪಡೆಯುವ ಬಗ್ಗೆ ಮೋದಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು 5.81 ಲಕ್ಷ ಮತಗಳನ್ನು ಪಡೆಯುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು.