ನವದೆಹಲಿ : ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತೀ ಲೀಟರ್ ಪೆಟ್ರೋಲ್ ದರಕ್ಕೆ 1.5೦-2ರೂಪಾಯಿ, ಡಿಸೇಲ್ ದರದಲ್ಲಿ 1.25-1.50 ರೂಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿದಿರುವುದರಿಂದ ಭಾರತದಲ್ಲಿ ದರ ಇಳಿಕೆಯಾಗುತ್ತಿದ್ದು ಶುಕ್ರವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆಯಿದೆ.
ಒಂದೇ ತಿಂಗಳಿನಲ್ಲಿ ಪೆಟ್ರೋಲ್ ದರ ಕಡಿಮೆಯಾಗುತ್ತಿರುವುದು ಇದು ಎರಡನೇ ಬಾರಿ. ಕಳೆದ ವಾರವಷ್ಟೇ ಕೇಂದ್ರ ಸರ್ಕಾರ ತೈಲ ಬೆಲೆಯನ್ನು 3.37 ರೂಪಾಯಿಯಷ್ಟು ಇಳಿಕೆ ಮಾಡಿತ್ತು.
ಬೆಲೆ ಇಳಿಕೆ, ಜಾರ್ಖಂಡ್, ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.