ನವದೆಹಲಿ : ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗಳಲ್ಲಿ ಕ್ರಮ ಜರುಗಿಸಲು ತಮಿಳುನಾಡು ಸರ್ಕಾರ ಮುಂದಾಗಿತ್ತು, ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದ್ದು, 6 ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರ ಮತ್ತು ಜಯಲಲಿತಾ ಅವರಿಗೆ ನೋಟಿಸ್ ನೀಡಿದೆ.
ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಮೂಲಕ ತಮ್ಮ ವಾಕ್ ಸ್ವಾತಂತ್ರ್ಯಕ್ಕೆ ತಡೆಯೊಡ್ಡಲು ತಮಿಳುನಾಡು ಸರ್ಕಾರ ಯತ್ನ ನಡೆಸಿದೆ ಎಂದು ಸ್ವತ: ಸುಬ್ರಹ್ಮಣ್ಯಂ ಸ್ವಾಮಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.