ನವದೆಹಲಿ : ದೆಹಲಿಯ ಜಮ್ಮಾ ಮಸೀದಿಯ ಉತ್ತರಾಧಿಕಾರಿ ನೇಮಕ ಸಮಾರಂಭಕ್ಕೆ ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ. ಇದು ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಮಸೀದಿಯ ಶಾಹಿ ಇಮಾಮ್ ಸಯ್ಯದ್ ಅಹ್ಮದ್ ಬುಖಾರಿ, ಉತ್ತರಾಧಿಕಾರ ಸ್ವೀಕಾರ ಸಮಾರಂಭ ನವೆಂಬರ್ 22ರಂದು ನಡೆಯಲಿದ್ದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಗೃಹ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಹರ್ಷವರ್ಧನ್, ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರಿಗೆ ಆಹ್ವಾನ ನೀಡಿದ್ದಾರೆ. ಆದರೆ 120ಕೋಟಿ ಜನರನ್ನು ಪ್ರತಿನಿಧಿಸುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಆಹ್ವಾನ ನೀಡಿಲ್ಲ.
2002ರ ಗೋಧ್ರಾ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿಲ್ಲ ಎಂದು ಬುಖಾರಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬುಖಾರಿಯ ಉದ್ಧಟತನಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.