ನವದೆಹಲಿ : ಜ.1, 2015 ರಿಂದ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್ ಖಾತೆಗೇ ಜಮಾ ಆಗಲಿದೆ.
ಈ ಬಗ್ಗೆ ಟ್ವೀಟರ್ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್ ಪಿಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ಹಾಕಲಾಗುತ್ತಿದ್ದು, ಜ.1ರಿಂದ ದೇಶಾದ್ಯಂತ ಚಾಲನೆ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಎಲ್ಪಿಜಿ ಗ್ರಾಹಕರು, ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಿಸುವಂತೆಯೂ ಕರೆ ನೀಡಿದ್ದಾರೆ. ಒಂದು ವೇಳೆ ಗ್ರಾಹಕರ ಬಳಿ ಆಧಾರ್ ಸಂಖ್ಯೆ ಇಲ್ಲದೇ ಹೋದಲ್ಲಿ ಎಲ್ಪಿಜಿ ಗ್ರಾಹಕ ಸಂಖ್ಯೆಯನ್ನು ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಜೋಡಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.