Untitled Document
Sign Up | Login    
Dynamic website and Portals
  
November 17, 2014

ಮೂಢನಂಬಿಕೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಮಠಾಧೀಶರ ಉಪವಾಸ ಸತ್ಯಾಗ್ರಹ

BW News Bureau : 'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಮತ್ತೊಮ್ಮೆ ಸುದ್ದಿಯಲ್ಲಿದ್ದು, ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರಗತಿಪರ ಸ್ವಾಮೀಜಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಮಠಾಧೀಶರು, ರಾಜ್ಯ ಸರ್ಕಾರ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ನಿಡುಮಾಮಿಡಿ ಮಠವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಿದ್ದಾರೆ. ಸರ್ಕಾರ, ಕಾಯ್ದೆ ಜಾರಿ ಮಾಡುವವರೆಗೂ ಆಮರಣಾಂತ ಉಪವಾಸ ಕೈಗೊಳ್ಳುವುದಾಗಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಎಚ್ಚರಿಸಿದ್ದಾರೆ.

ಗ್ರಾಮೀಣಭಾಗದಲ್ಲಿ ಮೂಢನಂಬಿಕೆಯಿಂದ ಮಹಿಳೆಯರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗಷ್ಟೇ ಖಾಸಗಿ ವಾಹಿನಿಯೊಂದು ಹೆಣ್ಣಾಗಿದ್ದೇ ತಪ್ಪಾ? ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಮೂಢನಂಬಿಕೆಗಳಿಗೆ ತುತ್ತಾಗಿರುವ ಗ್ರಾಮೀಣ ಭಾಗದ ಜನತೆಯಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಖಂಡಿಸಿರುವ ಮಠಾಧೀಶರು ಸರ್ಕಾರ ಕೂಡಲೇ ಮೂಢನಂಬಿಕೆ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರದ ಪ್ರತಿನಿಧಿಗಳು ಅಥವಾ ಸಿ.ಎಂ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited