ಶ್ರೀನಗರ : ಭಾರತದ ಗಡಿಯಲ್ಲಿ ಪಾಕಿಸ್ತಾನ ತನ್ನ ಪುಂಡಾಟಿಕೆ ಮುಂದುವರೆಸಿದೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನಿವಾಸದ ಬಳಿ ಪಾಕ್ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಬೆಳಿಗ್ಗೆ 7.30ರ ಸುಮಾರಿನಲ್ಲಿ ಶ್ರೀನಗರದಲ್ಲಿರುವ ಒಮರ್ ಅಬ್ದುಲ್ಲಾ ಮನೆ ಬಳಿ ಯೋಧನೊಬ್ಬ ಗಾಳಿಯಲ್ಲಿ 15 ಸುತ್ತು ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಗುಂಡು ಹಾರಿಸಿದ ವೇಳೆಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮನೆಯಿರಲಿಲ್ಲ ಎಂದು ತಿಳಿದು ಬಂದಿದ್ದು, ಆರೋಪಿ ಯೋಧನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ನಡುವೆ ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ಬಳಿ ಎರಡು ಬಿಎಸ್ ಎಫ್ ಶಿಬಿರಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆ ಪ್ರತಿದಾಳಿ ನಡೆಸಿದೆ.