Untitled Document
Sign Up | Login    
Dynamic website and Portals
  
November 20, 2014

ಕಿಸ್ ಆಫ್ ಲವ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಪೊಲೀಸರಿಗೆ ದೂರು

ಬೆಂಗಳೂರು : ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಸಾಮಾಜಿಕ ಹೋರಾಟಗಾರ ವಿನಯ್ ಕುಮಾರ್ ಎಂಬುವವ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಎಂ.ಜಿ ರಸ್ತೆ ಹಾಗೂ ಟೌನ್ ಹಾಲ್ ಬಳಿ ಸಾರ್ವಜನಿಕವಾಗಿ ಕಿಸ್ ಆಫ್ ಲವ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವುದರಿಂದ ಸಾರ್ವಜನಿಕರಿಗೆ ಮುಜುಗರ ಉಂಟಾಗುತ್ತದೆ ಎಂದು ವಿನಯ್ ಕುಮಾರ್ ಆರೋಪಿಸಿ ದೂರು ನೀಡಿದ್ದಾರೆ. ಸಾರ್ವಜನಿಕರಿಗೆ ಮುಜುಗರ ಉಂಟು ಮಾಡುವ ಕಿಸ್ ಆಫ್ ಲವ್ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಹಿಂದೂ ಜಾಗರಣಾ ವೇದಿಕೆ, ಶ್ರೀರಾಮ ಸೇನೆ ಸೇರಿದಂತೆ ಹಲವು ಸಂಘಟನೆಗಳು ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಆಂಧೋಲನ ನಡೆಯಲು ಅವಕಾಶ ನೀಡಬಾರದು ಎಂದು ಪೊಲೀಸರಲ್ಲಿ ಮನವಿ ಮಾಡಿವೆ.

ನೈತಿಕ ಪೊಲೀಸ್ ಗಿರಿ ವಿರೋಧಿಸಿ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರ್ ಎಂಬುವವರು ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ಕಿಸ್ ಆಫ್ ಲವ್ ಆಂಧೋಲನ ನಡೆಸುವುದಾಗಿ ಹೇಳಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited