Shivajinagar : ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂ.ಎನ್ ರೆಡ್ಡಿ, ನವೆಂಬರ್ 30 ರಂದು ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ಕೇಳಿ ಮನವಿ ಸಲ್ಲಿಸಲಾಗಿತ್ತು. ಆದರೆ ಇದು ಭಾರತೀಯ ದಂಡ ಸಂಹಿತೆಯ 294(ಎ) ಉಲ್ಲಂಘನೆಯಾಗಲಿದ್ದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ನೈತಿಕ ಪೊಲೀಸ್ ಗಿರಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಸ್ವರೂಪದ ಹಿನ್ನೆಲೆ ತಿಳಿಸಲು ಆಯೀಜಕರಿಗೆ ಸೂಚನೆ ನೀಡಲಾಗಿತ್ತು. ಆದರೆ ಈ ವರೆಗೆ ಯಾವುದೇ ವಿವರಣೆ ನೀಡಿಲ್ಲವಾದ್ದರಿಂದ ಅನುಮತಿ ನಿರಾಕರಿಸಲಾಗಿದೆ ಎಂದು ರೆಡ್ಡಿ ತಿಳಿಸಿದ್ದಾರೆ. ಅಲ್ಲದೇ ಇಂಥ ಆಚರಣೆಗಳು ಶಾಂತಿ ಮತ್ತು ಭದ್ರತೆಗೆ ಭಂಗ ತರುವಂತೆ ಕಂಡುಬರುತ್ತಿದ್ದು ಅವಕಾಶ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಕಿಸ್ ಆಫ್ ಲವ್ ಬಗ್ಗೆ ರಾಜ್ಯಾದ್ಯಂತ ತೀವ್ರ ವಿರೊಧ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಸಾರ್ವಜನಿಕ ಕ್ಷೇತ್ರದಲ್ಲಿ ಅಶ್ಲೀಲವಾಗಿ ವತರ್ತಿಸುವುದು ಐಪಿಸಿ ಸೆಕ್ಷನ್ 294(ಎ) ಪ್ರಕಾರ ಶಿಕ್ಷಾರ್ಹ ಅಪರಾಧ. ಈ ರೀತಿ ವರ್ತಿಸಿದವರಿಗೆ ಮೂರು ತಿಂಗಳು ಜೈಲು ಅಥವಾ ದಂಡ ವಿಧಿಸಬಹುದಾಗಿದೆ.