Untitled Document
Sign Up | Login    
Dynamic website and Portals
  
November 27, 2014

ಬದೌನ್ ಸಹೋದರಿಯರದ್ದು ಕೊಲೆಯಲ್ಲ, ಆತ್ಮಹತ್ಯೆ: ಸಿಬಿಐ ವರದಿ

ಲಖ್ನೌ : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ.

ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದೆ.

ಸಹೋದರಿಯರನ್ನು ಕೊಲೆ ಮಾಡಿಲ್ಲ. ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಕಳೆದ ಮೇ 28ರಂದು ಬದೌನ್‌ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 14 ಹಾಗೂ 15 ವರ್ಷದ ಸಹೋದರಿಯರಿಬ್ಬರ ಶವ ಪತ್ತೆಯಾಗಿತ್ತು. ಮರು ದಿನ ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ನಡೆಸಿ, ಕೊಲೆ ಮಾಡಿ ಮರಕ್ಕೆ ನೇಣು ಬಿಗಿದಿದ್ದಾರೆ ಎಂದು ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಅಲ್ಲದೇ ಅಖಿಲೇಶ್ ಯಾದವ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited