ನವದೆಹಲಿ : ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿವೆ.
ಕೇಂದ್ರ ಸರ್ಕಾರ ರಾಮ್ ನಾಯ್ಕ್ ಅವರನ್ನು ವಜಾಗೊಳಿಸದೇ ಇದ್ದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ದೂರು ನೀಡುವುದಾಗಿ ಕಾಂಗ್ರೆಸ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶದ ರಾಜ್ಯಪಾಲರಾಗಿರುವ ರಾಮ್ ನಾಯ್ಕ್ ಅವರು ಅಯೋಧ್ಯೆಯಲ್ಲಿ ಶೀಘ್ರವೇ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.