ಕೋಲ್ಕತ್ತಾ : 'ಶಾರದಾ ಚಿಟ್ ಫಂಡ್' ಹಗರಣದಲ್ಲಿ ಸಚಿವ ಮದನ್ ಮಿಶ್ರಾ ಅವರನ್ನು ಬಂಧಿಸಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಡಿ.13ರಂದು ಮಧ್ಯಾಹ್ನ 1ಗಂಟೆಗೆ ಸೆಂಟ್ರಲ್ ಕೋಲ್ಕತ್ತಾದ ಮೈದಾನ್ ಏರಿಯಾದಲ್ಲಿ ಟಿಎಂಸಿ ಪ್ರತಿಭಟನೆ ನಡೆಸಲಿದೆ. ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಡಿ.12ರಂದು ಪಶ್ಚಿಮ ಬಂಗಾಳದ ಸಿ.ಬಿ.ಐ ಸಾರಿಗೆ ಸಚಿವ ಮದನ್ ಮಿಶ್ರಾ ಅವರನ್ನು ಬಂಧಿಸಿತ್ತು. ಬಂಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮದನ್ ಮಿತ್ರರನ್ನು ಸಿಬಿಐ ಪೊಲೀಸರು ಬಂಧಿಸಿರುವುದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂದು ಆರೋಪಿಸಿದ್ದರು.
ಬಿಜೆಪಿ ವಿರುದ್ಧ ಅಧಿಕಾರ ದುರಪಯೋಗ ಆರೋಪ ಮಾಡಿದ ಮಮತಾ ಬ್ಯಾನರ್ಜಿ ಅವರು, ಸಂವಿಧಾನಿಕ ಸಂಸ್ಥೆಗಳ ಕಾರ್ಯ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿನಾಃ ಹಸ್ತಕ್ಷೇಪ ಮಾಡುತ್ತಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕರನ್ನು ಮಾತ್ರ ಬಂಧಿಸಲಾಗುತ್ತಿದೆ. ಇದರೊಂದಿಗೆ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಗೂಂಡಾಗಿರಿ ನಡೆಸುತ್ತಿದ್ದು, ಜಾತ್ಯತೀತ ಶಕ್ತಿಗಳನ್ನು ಹತ್ತಿಕುವ ಯತ್ನ ನಡೆಸುತ್ತಿದೆ ಎಂದು ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.