ಬೆಳಗಾವಿ : ರಾಜ್ಯದಾದ್ಯಂತ ಅನುಮತಿರಹಿತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಸದಸ್ಯ ಎಂ.ಶ್ರೀನಿವಾಸ್ ಅವರು ಕೇಳಿದ ಪ್ರಶ್ನೆಗೆ ಉತ್ತರಸಿದ ಸಚಿವರು ಯಾವ ಅಧಿಕಾರಿಗಳ ಅವಧಿಯಲ್ಲಿ ಅನಧಿಕೃತ ಶಾಲೆಗಳು ಪ್ರಾರಂಭಗೊಂಡಿವೆ. ಎಂಬ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಮಾಹಿತಿ ಬಂದ ಕೊಡಲೇ ಆಯಾ ಅಧಿಕಾರಿಗಳ ಮೇಲೆ ಕಾನೂನಿನಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದರು.
ಬೆಂಗಳೂರು ನಗರದಲ್ಲಿ ಒಟ್ಟು 2736 ಪ್ರಾಥಮಿಕ ಹಾಗೂ 1682 ಪ್ರೌಢ ಅನುಧಾನರಹಿತ ಶಾಲೆಗಳಿವೆ. ಪೋಷಕರ ಮಾಹಿತಿಗಾಗಿ ನಮ್ಮ ಇಲಾಖೆಯ ವೆಬ್ಸೈಟ್ನಲ್ಲಿ ಅನುದಾನರಹಿತ ಶಾಲೆಗಳ ವಿವರವನ್ನು ಪ್ರಕಟಿಸಲಾಗಿದೆ. ಹಂತ ಹಂತವಾಗಿ ಇಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ತೊಂದರೆಯಾಗದ ರೀತಿಯಲ್ಲಿ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಸಭೆಯಲ್ಲಿ ತಿಳಿಸಿದರು.