Untitled Document
Sign Up | Login    
Dynamic website and Portals
  
December 18, 2014

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿಃ ಸೇನಾಪಡೆಯಿಂದ ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದ ಕುಪ್ವಾರದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ.18ರಂದು ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.

ಸೇನಾ ಮೂಲಗಳ ಪ್ರಕಾರ, ಉಗ್ರರ ವಿರುದ್ಧದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಈ ಎನ್‌ ಕೌಂಟರ್ ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಯೋಧನೋರ್ವನಿಗೆ ಗಾಯಗಳಾಗಿವೆ. ಸದ್ಯ ಯೋಧನನ್ನು ಸೇನಾ ಕ್ಯಾಂಪ್ ಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿಮೀರಿದ್ದು ಗಡಿ ಪ್ರದೇಶದಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕುಪ್ವಾರದಲ್ಲಿ ಇನ್ನೂ ಇಬ್ಬರು ಉಗ್ರರು ಅಡಗಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited