ನವದೆಹಲಿ : 'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಲು ಎನ್.ಸಿ ಮುಖಂಡ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ.
ಡಿ.25ರಂದು ನವದೆಹಲಿಗೆ ತೆರಳಿರುವ ಓಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.
ಕಣಿವೆ ರಾಜ್ಯದ ಚುನಾವಣಾ ಫಲಿತಾಂಶದಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆಯದ ಕಾರಣ, ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ. ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚನೆಯಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸಲಿದೆ, ಪಿಡಿಪಿ ಪಕ್ಷಕ್ಕೆ 29 ಸ್ಥಾನಗಳು ದೊರೆತಿದ್ದು, ಬಿಜೆಪಿಗೆ 25 ಸ್ಥಾನಗಳನ್ನು ಪಡೆದಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳು ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಲು ಮುಂದಾಗಿವೆ.