Untitled Document
Sign Up | Login    
Dynamic website and Portals
  
December 27, 2014

ಜ.19ರಿಂದ ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

BW News Bureau : ದಕ್ಷಿಣ ಭಾರತದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಜ.19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಿದೆ.

ಹಿಂದೆ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದ ಅನಂತರ ಮತ್ತು ಕರ್ನಾಟಕದಲ್ಲಿ ಬಿಜೆಪಿ ತನ್ನ ಸ್ವಂತ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಬೆಂಗಳೂರಿನಲ್ಲೇ ರಾಷ್ಟ್ರೀಯ ಕಾರ್ಯಕಾರಿ ಸಭೆ ಆಯೋಜಿಸಲಾಗಿತ್ತು.

ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಿದ ಅನಂತರ ಪಕ್ಷ ಬಲವರ್ಧನೆಗಾಗಿ ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ವಿಶೇಷ ಗಮನ ವಹಿಸಲಾಗುತ್ತಿದೆ.ಇದಕ್ಕೆ ಪೂರಕವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ತಂತ್ರ ರೂಪಿಸುತ್ತಿದ್ದಾರೆ.

ಜತೆಗೆ ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್‌ ಗಟ್ಟಿಯಾಗಿ ಉಳಿದುಕೊಂಡಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಈ ನಿಲುವಿಗೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರೂ ಆಗಮಿಸಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited