ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಎಂಬ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬಂಧಿತ ಉಗ್ರನನ್ನು ಅಬು ಎಂದು ಗುರುತಿಸಲಾಗಿದ್ದು, ಈತ ಲಷ್ಕರ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಬಂಧಿತನಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಭಾರತೀಯ ಸೇನಾ ಪಡೆ, ವಿಚಾರಣೆ ನಡೆಸಲಾಗುತ್ತಿದೆ.
ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ, ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎಂದು ಈ ಹಿಂದೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಅದರಂತೆಯೇ ಉಗ್ರರ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾ ಪಡೆ ಇಂದು ಓರ್ವ ಉಗ್ರನನ್ನು ಬಂಧಿಸಿದೆ