ಕೋಲ್ಕತ್ತಾ : 'ಪಶ್ಚಿಮ ಬಂಗಾಳ'ದಲ್ಲಿ ಸರ್ಕಾರ ರಚಿಸುವ ಗುರಿ ಹೊಂದಿರುವ ಬಿಜೆಪಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರಿಗೆ ಗಾಳ ಹಾಕಿದೆ.
ಸೌರವ್ ಗಂಗೂಲಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದರ ಮೂಲಕ ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಬಿಜೆಪಿ ಯೋಜನೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆರಿಸಲು ಪಣ ತೊಟ್ಟಿರುವ ಬಿಜೆಪಿ, ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ಪಕ್ಷಕ್ಕೆ ಸೆಳೆಯಲು ಯತ್ನ ಆರಂಭಿಸಿದೆ. ಗಂಗೂಲಿ ಅವರು ಪಕ್ಷ ಸೇರ್ಪಡೆಯಾಗುವ ಬಗ್ಗೆ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈಗಾಗಲೇ ಬಂಗಾಳದಲ್ಲಿ ಬಿಜೆಪಿ ಬಲಪಡಿಸಲು ರಣತಂತ್ರ ಆರಂಭಿಸಿದ್ದು, ತೃಣಮೂಲ ಕಾಂಗ್ರೆಸ್ನ ಸಚಿವರಾಗಿದ್ದ ಮುಕುಲ್ ಕೃಷ್ಣಾ ಅವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ಮೊದಲ ಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ ಅವರೂ ಸಹ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ನವದೆಹಲಿ, ಬಿಹಾರದ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುವುದಾಗಿ ಹೇಳಿದ್ದರು.