ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜಂಟಿಯಾಗಿ ನಡೆಸಿಕೊಟ್ಟ ಮನ್ ಕಿ ಬಾತ್ ರೇಡಿಯೋ ಭಾಷಣ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.
ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭಾನುವಾರ ಮಧ್ಯಾಹ್ನ ಪ್ರಧಾನಿ ಮೋದಿ ಮತ್ತು ಒಬಾಮ ಅವರ ಭಾಷಣವನ್ನು ರೆಕಾರ್ಡಿಂಗ್ ಮಾಡಿಕೊಳ್ಳಲಾಗಿದೆ. 35 ನಿಮಿಷಗಳ ಕಾಲದ ಕಾರ್ಯಕ್ರಮ ಇದಾಗಿದೆ.
ಈ ಹಿಂದೆ ಮೋದಿ ಅವರು ನಡೆಸಿಕೊಡುತ್ತಿದ್ದ ಮನ್ ಕಿ ಬಾತ್ ಕಾರ್ಯಕ್ರಮಕ್ಕಿಂತ ಸ್ವಲ್ಪ ದೊಡ್ಡದಾಗಿರಲಿದೆ. ಒಬಾಮ ಅವರೊಂದಿಗೆ ಸೇರಿ ಮನ್ ಕಿ ಬಾತ್ ಕಾರ್ಯಕ್ರಮವನ್ನು ರೆಕಾರ್ಡಿಂಗ್ ಮಾಡುತ್ತಿರುವ ಫೋಟೋವನ್ನು ಮೋದಿ ಟ್ವೀಟ್ ಮಾಡಿದ್ದು, 8 ಗಂಟೆಗೆ ಪ್ರಸಾರವಾಗಲಿದೆ ಎಂದು ಹೇಳಿದ್ದಾರೆ.
ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮ ಏರ್ ಇಂಡಿಯಾ ರೇಡಿಯೋದಲ್ಲಿ ಪ್ರಸಾರಗೊಳ್ಳುವುದರ ಜತೆಗೆ ದೂರದರ್ಶನ ಮತ್ತು ಇತರ ಖಾಸಗಿ ರೇಡಿಯೋ ಮತ್ತು ಟೀವಿ ಚಾನಲ್ ಗಳಲ್ಲಿ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ಕನ್ನಡ ಸೇರಿದಂತೆ ಇತರ ಪ್ರಾದೇಶಿಕ ಭಾಷೆಯಲ್ಲಿ 9 ಗಂಟೆಗೆ ಮರು ಪ್ರಸಾರವಾಗಲಿದೆ.