ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಎಯಲ್ಲಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ 2ನೇ ಬಾರಿಗೆ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 2014ರ ಫೆ.14ರಂದೇ ತಮ್ಮ ಮುಖ್ಯಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ಕೇಜ್ರಿವಾಲ್, ಇದೀಗ ಒಂದು ವರ್ಷದ ನಂತರ ಅದೇ ದಿನದಂದು ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿರುವುದು.
ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಂಡು, ಆಪ್ ನ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ.
ಕೇಜ್ರಿವಾಲ್ ಜೊತೆಗೆ ಮನೀಶ್ ಸಿಸೋಡಿಯಾ, ಹಸೀಂ ಅಹ್ಮದ್ ಖಾನ್, ಸಂದೀಪ್ ಕುಮಾರ್, ಸತ್ಯೇಂದ್ರ ಜೈನ್, ಗೋಪಾಲ್ ರಾಯ್, ಜಿತೇಂದ್ರ ತೋಮರ್ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.