Untitled Document
Sign Up | Login    
Dynamic website and Portals
  
February 19, 2015

ಪೃಥ್ವಿ 2 ಖಂಡಾಂತರ ಕ್ಷಿಪಣಿ ಯಶಸ್ವಿ ಉಡಾವಣೆ

ಪೃಥ್ವಿ-2  ಕ್ಷಿಪಣಿ ಪೃಥ್ವಿ-2 ಕ್ಷಿಪಣಿ

ಭುವನೇಶ್ವರ್ : ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. ಕ್ಷಿಪಣಿ ಗುರಿ ತಲುಪಿದ್ದನ್ನು ಭಾರತೀಯ ರಾಡಾರ್ ಗಳು ಪತ್ತೆ ಮಾಡಿದ್ದು, ವಿಜ್ಞಾನಿಗಳಲ್ಲಿ ಹರ್ಷ ಮೂಡಿಸಿದೆ.

ಪೃಥ್ವಿ-2 ಸಂಪೂರ್ಣ ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದ್ದು, 350 ಕಿಮೀ ವ್ಯಾಪ್ತಿಯ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಷಿಪಣಿಯನ್ನು ಕರಾವಳಿ ಭದ್ರತೆಗಾಗಿ ಸಂಶೋಧಿಸಲಾಗಿದ್ದು, ಶತ್ರು ಪಾಳಯದ ನೌಕೆಗಳನ್ನು ಕ್ಷಣಮಾತ್ರದಲ್ಲಿ ಉಡಾಯಿಸಬಲ್ಲ ಸಾಮರ್ಥ್ಯ ಪೃಥ್ವಿ-2 ಕ್ಷಿಪಣಿಗಿದೆ. ಇನ್ನು ಕ್ಷಿಪಣಿಯ ಮತ್ತೊಂದು ಪ್ರಮುಖ ಅಂಶವೆಂದರೆ ಇದು ಖಡಾಂತರ ಕ್ಷಿಪಣಿಯಾಗಿದ್ದು. ಭೂಮಿಯ ಮೇಲ್ಮೈಯಿಂದ ಮೇಲ್ಮೈಗೆ ಪ್ರಯೋಗಿಸಬಹುದಾಗಿದೆ.

ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ಬೆಳಗ್ಗೆ ಸಂಯುಕ್ತ ಪರೀಕ್ಷಾ ವಲಯದಲ್ಲಿನ 3ನೇ ಸಂಕೀರ್ಣದಿಂದ ಈ ಪರೀಕ್ಷಾರ್ಥ ಉಡಾವಣೆ ನಡೆಸಿತ್ತು. ಪೃಥ್ವಿ-2 ಕ್ಷಿಪಣಿ 350 ಕಿ.ಮೀ ದೂರವನ್ನು ಕ್ರಮಿಸುವಲ್ಲಿ ಯಶಸ್ವಿಯಾಗಿದೆ ಎಂದು ಐಟಿಆರ್ ಅಧ್ಯಕ್ಷ ಎಂ.ವಿ.ಕೆ.ವಿ ಪ್ರಸಾದ್ ಮಾಹಿತಿ ನೀಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Science & Technology

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.
  • ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ
  • ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited