ಬೆಂಗಳೂರು : ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ.
ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ. ಆದರೆ, ಅಧ್ಯಕ್ಷರ ಸ್ಥಾನಕ್ಕೆ ತಮ್ಮನ್ನು ನೇಮಕಮಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ಧನ್ಯವಾದ ಸಲ್ಲಿಸುವುದಾಗಿ ರಾಜೀನಾಮೆ ಪತ್ರದಲ್ಲಿ ನಾಣಯ್ಯ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ತಜ್ಞರ ಸಮಿತಿ ವರದಿ ನೀಡಲು ಇನ್ನು 3 ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ನಾಣಯ್ಯ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.