ಶ್ರೀನಗರ : ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕೆಯನ್ನು ಭದ್ರತಾ ಪಡೆ ಸಿಬ್ಬಂದಿಗಳು ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿ,ಇಬ್ಬರು ಸೇನಾಪಡೆ ಜವಾನರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು ಉಗ್ರರು ಅಡಗಿ ಕುಳಿತಿರುವ ಮನೆಯನ್ನು ಸುತ್ತುವರೆದಿದ್ದು, ಉಗ್ರರ ದಮನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.