ಬೆಂಗಳೂರು : ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ.
ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ, ಅಂಗೀಕರಿಸುವ ಸಾಧ್ಯತೆ ಇದೆ.
ವಿಶೇಷ ಅಧಿವೇಶನ ಹಿನ್ನಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯಲ್ಲಿ ಬಿಬಿಎಂಪಿ ವಿಭಜನೆ ಕುರಿತು ಚರ್ಚೆ ನಡೆಯಲಿದೆ.
ಈ ಮಧ್ಯೆ, ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ.