ನವದೆಹಲಿ : ಭಾರತ ವಿರೋಧಿ, ಪ್ರತ್ಯೇಕತಾವಾದಿ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಗೆ ಸೂಚಿಸಿದ್ದಾರೆ.
ರಾಷ್ಟ್ರದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ದೂರವಾಣಿ ಮೂಲಕ ನಡೆಸಿದ ಮಾತುಕತೆ ವೇಳೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಮ್ಮು-ಕಾಶ್ಮೀರ ಡಿಸಿಎಂ ನಿರ್ಮಲ್ ಕುಮಾರ್ ತಿಳಿಸಿದ್ದಾರೆ. ಪ್ರತ್ಯೇಕತಾವಾದಿ ಮುಖಂಡರ ವಿರುದ್ಧ ಈಗಾಗಲೇ ಎಫ್.ಐ.ಆರ್ ದಾಖಲಾಗಿದೆ. ಸೂಕ್ತ ಸಮಯದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರತ್ಯೇಕತಾವಾದಿಗಳ ಬಂಧನಕ್ಕೆ ನಾನು ಯಾವುದೇ ಗಡುವು ನೀಡಲ್ಲ ಎಂದಿರುವ ಮುಫ್ತಿ, ಕಾನೂನು ಪ್ರಕಾರ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.